ಮಂಡ್ಯದಲ್ಲಿ 100 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ಆಸ್ಪತ್ರೆ ಸ್ಥಾಪನೆಗೆ ಸಿಎಂ ಸೂಚನೆ
ಮಂಡ್ಯ ಜಿಲ್ಲೆಯ ಜನರ ಬಹುದಿನಗಳ ನಿರೀಕ್ಷೆಯಾಗಿರುವ ಸುಸಜ್ಜಿತ ಹೃದ್ರೋಗ ಚಿಕಿತ್ಸಾ ಸೌಲಭ್ಯ

ಮಂಡ್ಯ: ಮಂಡ್ಯ ಜಿಲ್ಲೆಯ ಜನರ ಬಹುದಿನಗಳ ನಿರೀಕ್ಷೆಯಾಗಿರುವ ಸುಸಜ್ಜಿತ ಹೃದ್ರೋಗ ಚಿಕಿತ್ಸಾ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮಂಡ್ಯ ನಗರದಲ್ಲಿ 100 ಹಾಸಿಗೆ ಸಾಮರ್ಥ್ಯದ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯ ಉಪಕೇಂದ್ರ ಸ್ಥಾಪಿಸುವಂತೆ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ. ರವಿಕುಮಾರ್ ಗೌಡ ಗಣಿಗ ಅವರು ಸಲ್ಲಿಸಿದ್ದ ಮನವಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸ್ಪಂದಿಸಿದ್ದು, ಅಗತ್ಯ ಕ್ರಮ ಕೈಗೊಂಡು ಯೋಜನೆ ರೂಪಿಸುವಂತೆ ಸೂಚನೆ ನೀಡಿದ್ದಾರೆ.ಮಂಡ್ಯ ಜಿಲ್ಲಾ ಕೇಂದ್ರವಾಗಿದ್ದು, ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪ್ರಮುಖ ಮಾರ್ಗದಲ್ಲಿದೆ. ಈ ಹೆದ್ದಾರಿಯಲ್ಲಿ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ಮಂಡ್ಯ ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗಾಗ್ಗೆ ರಸ್ತೆ ಅಪಘಾತಗಳು ಸಂಭವಿಸುತ್ತಿವೆ. ಇಂತಹ ಸಂದರ್ಭಗಳಲ್ಲಿ ಗಾಯಾಳುಗಳಿಗೆ ಸಕಾಲದಲ್ಲಿ ತುರ್ತು ಚಿಕಿತ್ಸೆ ದೊರೆಯುವುದು ಅತ್ಯಂತ ಅವಶ್ಯಕವಾಗಿದೆ.ಇದರೊಂದಿಗೆ ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು ತುರ್ತು ಚಿಕಿತ್ಸೆಗಾಗಿ ಮಂಡ್ಯದಿಂದ ಸುಮಾರು 50 ಕಿಲೋಮೀಟರ್ ದೂರದಲ್ಲಿರುವ ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ತೆರಳಬೇಕಾದ ಅನಿವಾರ್ಯತೆ ಇದೆ. ತುರ್ತು ಸಂದರ್ಭಗಳಲ್ಲಿ ದೂರದ ಆಸ್ಪತ್ರೆಗೆ ಪ್ರಯಾಣಿಸುವ ಸಮಯದಲ್ಲೇ ಅಮೂಲ್ಯ ಜೀವಕ್ಕೆ ಅಪಾಯ ಎದುರಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮಂಡ್ಯದಲ್ಲಿಯೇ ಸುಸಜ್ಜಿತ ಹೃದ್ರೋಗ ಚಿಕಿತ್ಸಾ ವ್ಯವಸ್ಥೆ ಕಲ್ಪಿಸುವ ಅಗತ್ಯವನ್ನು ಶಾಸಕರು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದರು.ಮಂಡ್ಯ ಜಿಲ್ಲೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳ ಜನರಿಗೆ ಹೃದಯ ಸಂಬಂಧಿ ಕಾಯಿಲೆಗಳ ತಪಾಸಣೆ ಮತ್ತು ಚಿಕಿತ್ಸೆ ಸ್ಥಳೀಯವಾಗಿಯೇ ದೊರೆಯಬೇಕು. ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗುವವರಿಗೆ ತುರ್ತು ವೈದ್ಯಕೀಯ ಸೇವೆ ಒದಗಿಸಲು ಅನುಕೂಲವಾಗಬೇಕು ಎಂಬ ಉದ್ದೇಶದಿಂದ 100 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ಆಸ್ಪತ್ರೆಯ ಉಪಕೇಂದ್ರವನ್ನು ಮಂಡ್ಯದಲ್ಲಿ ಸ್ಥಾಪಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದರು.ಶಾಸಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿಗಳು, ಈ ಯೋಜನೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೈಗೊಂಡು ಯೋಜನೆ ರೂಪಿಸುವಂತೆ ಸೂಚನೆ ನೀಡಿದ್ದಾರೆ. ಇದರಿಂದ ಮಂಡ್ಯದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ ಉಪಕೇಂದ್ರ ಸ್ಥಾಪನೆಯ ನಿರೀಕ್ಷೆ ಮತ್ತಷ್ಟು ಹೆಚ್ಚಿದ್ದು, ಜಿಲ್ಲೆಯ ಜನರಲ್ಲಿ ಆಶಾಭಾವನೆ ಮೂಡಿದೆ.ಮಂಡ್ಯದಲ್ಲಿ ಈ ಆಸ್ಪತ್ರೆ ಕಾರ್ಯಾರಂಭ ಮಾಡಿದರೆ ಹೃದ್ರೋಗಿಗಳು ಚಿಕಿತ್ಸೆಗಾಗಿ ದೂರದ ನಗರಗಳಿಗೆ ಅಲೆಯುವುದು ತಪ್ಪುವುದರ ಜೊತೆಗೆ ತುರ್ತು ಸಂದರ್ಭಗಳಲ್ಲಿ ಸಕಾಲದಲ್ಲಿ ಚಿಕಿತ್ಸೆ ದೊರೆಯಲು ಸಹಕಾರಿಯಾಗಲಿದೆ. ವಿಶೇಷವಾಗಿ ಹೃದಯಾಘಾತ ಮತ್ತು ರಸ್ತೆ ಅಪಘಾತದಂತಹ ತುರ್ತು ಸಂದರ್ಭಗಳಲ್ಲಿ ಸ್ಥಳೀಯವಾಗಿಯೇ ಸುಧಾರಿತ ವೈದ್ಯಕೀಯ ಸೇವೆ ಲಭ್ಯವಾಗಲು ಅನುಕೂಲವಾಗಲಿದೆ.
ಸಂಬಂಧಿತ ಸುದ್ದಿಗಳು

ಹಾಸನಾಂಬೆ ಭಕ್ತರಿಗೆ ಗುಡ್ನ್ಯೂಸ್: ಕೇವಲ 60 ರೂಪಾಯಿಗೆ ಲಾಡು ಪ್ರಸಾದ ವಿತರಣೆ..!
ಧರ್ಮ ದರ್ಶನಕ್ಕೆ ಬರುವ ಭಕ್ತರಿಗೆ ಲಾಡು ಪ್ರಸಾದವನ್ನು ಗರಿಷ್ಠ 60 ರೂಪಾಯಿಗೆ ವಿತರಿಸುವಂತೆ
◷ 01/11/2026
ದೆಹಲಿಯ ಶೂ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ: ನಾಲ್ವರು ಸಾವು, ಇಬ್ಬರಿಗೆ ಗಾಯ!
ದೆಹಲಿಯ ಮಂಗೋಲ್ಪುರಿ ಕೈಗಾರಿಕಾ ಪ್ರದೇಶದಲ್ಲಿರುವ ಶೂ..
◷ 01/11/2026
ಹಾಲಿನ ದರ ಏರಿಕೆ ಅನಿವಾರ್ಯ: ರೈತರ ಆದಾಯ ಹೆಚ್ಚಳಕ್ಕೆ ಸರ್ಕಾರದ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿಕೆಶಿ!
ರಾಜ್ಯದಲ್ಲಿ ನವೆಂಬರ್ 1ರಿಂದ ಜಾರಿಗೆ ಬರುವಂತೆ ನಂದಿರ್ಕಾರ
◷ 01/11/2026
17 ಖೈದಿಗಳು ಜೈಲಿನಿಂದ ಎಸ್ಕೇಪ್ ಕೇಸ್: ಅಧಿಕಾರಿಗಳ ಅಮಾನತು, ಹಿರಿಯ ಪೊಲೀಸ್ ಅಧಿಕಾರಿಗಳ ವರ್ಗಾವಣೆ!
ತಮಿಳುನಾಡಿನ ಥೇಣಿ ಜಿಲ್ಲೆಯ ಉಪಜೈಲಿನಿಂದ 17 ವಿಚಾರಣಾಧೀನ ಖೈದಿಗಳು ಪರಾರಿಯಾದ ಪ್ರಕರಣಕ್ಕೆ
◷ 01/11/2026
