ನವದೆಹಲಿ: ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಮೊದಲ ಬಂಧನವಾಗಿದೆ. ದೆಹಲಿ ಮೂಲದ ರಿತೇಶ್ ಪಾಂಡೆ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ವಿಡಿಯೋ ರೆಕಾರ್ಡ್ ಮಾಡಲು ಮೊಬೈಲ್ ಖರೀದಿ ಮಾಡಿದ್ದ. ಆರೋಪಿಯನ್ನು ದೆಹಲಿಯಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತರಲಾಗಿದೆ. ರಹಸ್ಯ ಸ್ಥಳದಲ್ಲಿ ಸಿಸಿಬಿ ಸೈಬರ್ ಕ್ರೈಮ್ ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನನ್ನನ್ನು ಬ್ಲಾಕ್‌ಮೇಲ್ ಮಾಡಲು ಸ್ಟಿಂಗ್‌, ನಾನು ಯಾವುದೇ ತಪ್ಪು ಮಾಡಿಲ್ಲ: ಸಿದ್ದರಾಮಯ್ಯ